kalimah.top
a b c d e f g h i j k l m n o p q r s t u v w x y z 0 1 2 3 4 5 6 7 8 9 #

dr. rajkumar - naavaduva nudiye kannada nudi كلمات أغنية

Loading...

ನಾವಾಡುವ ನುಡಿಯೇ ಕನ್ನಡ ನುಡಿ ಚಿನ್ನದ ನುಡಿ ಸಿರಿಗನ್ನಡ ನುಡಿ
ನಾವಿರುವ ತಾಣವೇ ಗಂಧದ ಗುಡಿ ಅಂದದ ಗುಡಿ ಚೆಂದದ ಗುಡಿ

ನಾವಾಡುವ ನುಡಿಯೇ ಕನ್ನಡ ನುಡಿ
ನಾವಿರುವ ತಾಣವೇ ಗಂಧದ ಗುಡಿ ಅಂದದ ಗುಡಿ ಗಂಧದ ಗುಡಿ ಚಂದದ ಗುಡಿ ಶ್ರೀಗಂಧದ ಗುಡಿ… ಅಹಹ ಅಹಹ ಅಹಹ…

ಹಸಿರಿನ ಬನಸಿರಿಗೇ ಒಲಿದು ಸೌಂದರ್ಯ ಸರಸ್ವತಿ ಧರೆಗಿಳಿದು
ಹರಿಯುವ ನದಿಯಲಿ ಈಜಾಡಿ ಹೂಬನದಲಿ ನಲಿಯುತ ಓಲಾಡಿ
ಚೆಲುವಿನ ಬಲೆಯ ಬೀಸಿದಳೋ ಈ ಗಂಧದ ಗುಡಿಯಲಿ ನೆಲೆಸಿಹಳೋ
ಇದು ಯಾರ ತಪಸಿನ ಫಲವೋ ಈ ಕಂಗಳು ಮಾಡಿದ ಪುಣ್ಯವೋ… ಅಹಹಹ ಓ…

ಚಿಮ್ಮುತ ಓಡಿವೆ ಜಿಂಕೆಗಳು ಕುಣಿದಾಡುತ ನಲಿದಿವೆ ನವಿಲುಗಳು
ಮುಗಿಲನು ಚುಂಬಿಸೋ ಆಸೆಯಲಿ ತೂಗಾಡುತ ನಿಂತ ಮರಗಳಲಿ
ಹಾಡುತಿರೆ ಬಾನಾಡಿಗಳು ಎದೆಯಲ್ಲಿ ಸಂತಸದಾ ಹೊನಲು
ಇದು ವನ್ಯ ಮೃಗಗಳ ಲೋಕವೋ ಈ ಭೂಮಿಗೆ ಇಳಿದ ನಾಕವೋ… ಅಹಹಹ ಓ…

كلمات أغنية عشوائية

كلمات الأغنية الشائعة حالياً

Loading...